Labels

Search :

Showing posts with label GopalaDaasaru. Show all posts
Showing posts with label GopalaDaasaru. Show all posts

Wednesday, February 14, 2024

ಆವ ರೋಗವು ಎನಗೆ ದೇವ ಧನ್ವಂತ್ರಿ !!

ಆವ ರೋಗವು ಎನಗೆ ದೇವ ಧನ್ವಂತ್ರಿ,    ಸಾಹಿತ್ಯ : ಗೋಪಾಲದಾಸರು,   ಗಾಯನ:ಶ್ರೀ ವಿದ್ಯಾಭೂಷಣ

ಆವ ರೋಗವು ಎನಗೆ ದೇವ ಧನ್ವಂತ್ರಿ ?

ಆವ ರೋಗವು ಎನಗೆ ದೇವ ಧನ್ವಂತ್ರಿ ?

ಸಾವಧಾನದಿ ಎನ್ನ ಕೈಪಿಡಿದು ನೋಡಯ್ಯ||

ಆವ ರೋಗವು ಎನಗೆ ದೇವ ಧನ್ವಂತ್ರಿ ?

+++music ++++

ಹರಿ ಮೂರ್ತಿಗಳು ಎನ್ನ ಕಂಗಳಿಗೆ ಕಾಣಿಸವು 

ಹರಿಯ ಕೀರ್ತನೆಯು ಕೇಳಿಸದು ಕಿವಿಗೆ 

ಹರಿ ಮೂರ್ತಿಗಳು ಎನ್ನ ಕಂಗಳಿಗೆ ಕಾಣಿಸವು 

ಹರಿಯ ಕೀರ್ತನೆಯು ಕೇಳಿಸದು ಕಿವಿಗೆ 

ಹರಿ ಮಂತ್ರಸ್ತೋತ್ರ ಬಾರದು ಎನ್ನ ನಾಲಿಗೆಗೆ 

ಹರಿ ಮಂತ್ರಸ್ತೋತ್ರ ಬಾರದು ಎನ್ನ ನಾಲಿಗೆಗೆ 

ಹರಿಪ್ರಸಾದ ಜಿಹ್ವೆಗೆ ಸವಿಯಾಗದಯ್ಯಾ..||

ಆವ ರೋಗವು ಎನಗೆ ದೇವ ಧನ್ವಂತ್ರಿ ?

+++music ++++

ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವು 

ಗುರುಹಿರಿಯರಂಘ್ರಿಗೆ ಶಿರ ಬಾಗದು 

ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವು 

ಗುರುಹಿರಿಯರಂಘ್ರಿಗೆ ಶಿರ ಬಾಗದು 

ಹರಿಯ ನಿರ್ಮಾಲ್ಯವಾ ಆಘ್ರಾಣಿಸದು ನಾಸಿಕ 

ಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ                         

ಆವ ರೋಗವು ಎನಗೆ ದೇವ ಧನ್ವಂತ್ರಿ ?

+++music ++++

ಅನಾಥಬಂಧು ಗೋಪಾಲವಿಠಲರೇಯ 

ಅನಾಥಬಂಧು ಗೋಪಾಲವಿಠಲರೇಯ 

ಎನ್ನಭಾಗ್ಯದ ವೈದ್ಯ ನೀನೆ ಆದಿ 

ಅನಾದಿ ಕಾಲದ ಭವರೋಗ ಕಳೆಯಯ್ಯ 

ಅನಾದಿ ಕಾಲದ ಭವರೋಗ ಕಳೆಯಯ್ಯ 

ನಾನೆಂದಿಗು ಮರೆಯೆ ನೀ ಮಾಡಿದುಪಕಾರ          

ಆವ ರೋಗವೊ ಎನಗೆ ದೇವ ಧನ್ವಂತ್ರಿ ?

ಸಾವಧಾನದಿ ಎನ್ನ ಕೈಪಿಡಿದು ನೋಡಯ್ಯ||

ಆವ ರೋಗವು ಎನಗೆ ದೇವ ಧನ್ವಂತ್ರಿ ?

ಆವ ರೋಗವು ಎನಗೆ ದೇವ ಧನ್ವಂತ್ರಿ ?

++++ ಧನ್ಯವಾದಗಳು ++++


Related Posts Plugin for WordPress, Blogger...
Related Posts Plugin for WordPress, Blogger...

Search More....

2014-2015-2016